ನೆಹರೂ ಅವರು ಸರ್.ಎಂ.ವಿಶ್ವೇಶ್ವರಯ್ಯ ಅವರ ಬಗ್ಗೆ ಏನೆಂದು ಹೇಳಿದ್ದರೆ ?​

Question

ನೆಹರೂ ಅವರು ಸರ್.ಎಂ.ವಿಶ್ವೇಶ್ವರಯ್ಯ ಅವರ ಬಗ್ಗೆ ಏನೆಂದು ಹೇಳಿದ್ದರೆ ?​

in progress 0
Julia 5 months 2021-07-08T02:00:16+00:00 2 Answers 0 views 0

Answers ( )

  0
  2021-07-08T02:01:48+00:00

  Explanation:

  ಈ ನಾಡಿನ ಮಹತ್ವದ ಚಿಂತನೆಗಳ ಹಿಂದಿರುವ ಪ್ರೇರಕಶಕ್ತಿ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯನವರು. ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕಾರಣಕರ್ತರೂ ಹೌದು.

  “ಯಾವುದೇ ಕೆಲಸ ಕೀಳಲ್ಲ. ನಿನ್ನ ಕೆಲಸ ಈ ರಸ್ತೆಯ ಈ ಭಾಗವನ್ನು ಗುಡಿಸುವುದಾಗಿದ್ದರೆ, ಜಗತ್ತಿನ ಅತ್ಯಂತ ಸ್ವಚ್ಚ ರಸ್ತೆಯಾಗುವಂತೆ ಗುಡಿಸು. ಅದೃಷ್ಟ ಎನ್ನುವುದು ದೇವರ ಕೈಯಲ್ಲಿ ನಿಷ್ಕ್ರಿಯವಾಗಿರುವ ಸಾಧನವಲ್ಲ. ನಮ್ಮ ಡೆಸ್ಟಿನಿ, ನಮ್ಮ ವಿಧಿ – ಮನುಷ್ಯನ ಕೈಯಲ್ಲಿರುವ ಸಾಧನ” ಎಂದು ಹೇಳುತ್ತಿದ್ದವರು ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು.

  ನೂರಾ ಎರಡು ವರ್ಷಗಳ ತುಂಬು ಬದುಕನ್ನು ಕರ್ಮಯೋಗಿಯಂತೆ ಬಾಳಿದವರು ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಬದುಕಿಡೀ ನಾಡಿಗೆ ದುಡಿದು, ಸೇವೆ ಸಲ್ಲಿಸಿದ ನಮ್ಮ ನೆಲದ ಹೆಮ್ಮೆಯ ಈ ಭಾರತೀಯ, ತಮ್ಮ ಜೀವಿತಕಾಲದಲ್ಲಿಯೇ ದಂತಕತೆಯಾದರು. ಜಗತ್ಪ್ರಸಿದ್ಧರಾದರು.

  ಇಂದು ನಮ್ಮ ಕನ್ನಡದ ನೆಲ, ವಿಜ್ಞಾನ, ತಂತ್ರಜ್ಞಾನಗಳ ತವರೂರಾಗಿದೆ. ಇದರ ಬುನಾದಿಯಲ್ಲಿ ವಿಶ್ವೇಶ್ವರಯ್ಯನವರ ಅಗಾಧ ಪರಿಶ್ರಮ ದೂರದೃಷ್ಟಿ, ಸಮಾಜಮುಖಿ ಯೋಜನೆಗಳಿವೆ. ಅವರ ಪ್ರತಿಭೆಯನ್ನು ಮನಗಂಡು ಅವರೊಡನೆ ಸಹಕರಿಸಿದ, ಅವರ ಯೋಜನೆಗಳನ್ನು ಬೆಂಬಲಿಸಿದ ಮೈಸೂರು ಮಹಾರಾಜರು, ದಿವಾನರುಗಳ ಸಹಯೋಗವೂ ಇದೆ. ನಿಜವಾದ ಅರ್ಥದಲ್ಲಿ ವಿಶ್ವೇಶ್ವರಯ್ಯ ಮೈಸೂರು ಸಂಸ್ಥಾನದ ಭಾಗ್ಯವಿಧಾತ, ಆಧುನಿಕ ಮೈಸೂರಿನ ನಿರ್ಮಾಣಕ್ಕೆ ಕಾರಣರಾದವರು.

  ೧೯೦೮ರಲ್ಲಿ ಅತ್ಯಂತ ಕೆಟ್ಟ ಪ್ರವಾಹ ಏರಿ ಬಂದು, ಹೈದರಾಬಾದಿಗೆ ಎಲ್ಲಿಲ್ಲದ ಹಾನಿಯಾಯಿತು. ವಿದೇಶ ಪ್ರವಾಸದಲ್ಲಿದ್ದ ವಿಶ್ವೇಶ್ವರಯ್ಯ ಅವರಿಗೆ ಹೈದರಾಬಾದಿನ ನಿಜಾಮರಿಂದ ತುರ್ತು ಕರೆ ಹೋಯಿತು. ತಮ್ಮ ವಿದೇಶ ಯಾತ್ರೆಯನ್ನು ಪೂರ್ಣಗೊಳಿಸದೆಯೇ ಹಿಂದಿರುಗಿ ಬಂದ ವಿಶ್ವೇಶ್ವರಯ್ಯ ಅವರು, ಅಂದಿನ ಹೈದರಾಬಾದನ್ನು ಪ್ರವಾಹದಿಂದ ರಕ್ಷಿಸಲು ಯೋಜನೆಗಳನ್ನು ತಯಾರಿಸಿಕೊಟ್ಟರು. ಅಂದಿನ ಹೈದರಾಬಾದ್ ನಗರದಿಂದ ಹದಿನಾರು ಮೈಲಿಗಳಾಚೆಗೆ ಓಸ್ಮಾನ್ ಸಾಗರ ಮತ್ತು ಹಿಮಾಯತ್ ಸಾಗರಗಳನ್ನು ನಿರ್ಮಿಸಲು ಕಾರಣರಾದರು. ನಗರದ ಒಳಚರಂಡಿ, ನೀರ್ಗಾಲುವೆಗಳ ವ್ಯವಸ್ಥೆಯನ್ನೂ ನಿರೂಪಿಸಿದರು. ಒಂದು ಕಾಲಕ್ಕೆ ಅಬ್ಬರಿಸಿ ಹರಿದ ಮುಸಿಯನ್ನು ಪಳಗಿಸಿ ಆಧುನಿಕ ಹೈದರಾಬಾದಿನ ನಿರ್ಮಾಣಕ್ಕೆ ವಿಶ್ವೇಶ್ವರಯ್ಯ ಕಾರಣರಾದರು.

  ನಮ್ಮ ಚಿಕ್ಕಂದಿನಿಂದ ನಮ್ಮ ವಿಶ್ವೇಶ್ವರಯ್ಯನವರು ಕನ್ನಂಬಾಡಿ ಕಟ್ಟೆ ಕಟ್ಟಿದ್ದು ಎಂದು ಜನ ಆಪ್ತವಾಗಿ ಕತೆ ಹೇಳುತ್ತಿದ್ದುದನ್ನು ಕೇಳಿ ಬೆಳೆದವರು ನಾವು. ಆ ಕಾಲಕ್ಕಾಗಲೇ ವಿಶ್ವೇಶ್ವರಯ್ಯ ದಂತಕತೆಯಾಗಿದ್ದರು. ಕಟ್ಟೆಯ ಮೇಲಿಂದ ಕೆಳಗೆ ತೆರೆದ ಬಾಗಿಲುಗಳಿಂದ ಭೋರ್ಗರೆದು ಹರಿಯುವ ಕಾವೇರಿಯ ನೀರನ್ನು ನೋಡುವುದೇ ಒಂದು ಅದ್ಭುತ ಅನುಭವವಾಗಿತ್ತು.

  ವಿಶ್ವೇಶ್ವರಯ್ಯನವರ ಸಮಯಪ್ರಜ್ಞೆಯ ಬಗ್ಗೆ ಅದೆಷ್ಟೋ ಕತೆಗಳಿದ್ದವು. ಅವರ ಪ್ರಾಮಾಣಿಕತೆಯನ್ನು ಕುರಿತ ಮೋಂಬತ್ತಿಯ ಕತೆಯಂತೂ ಜನಜನಿತವಾಗಿತ್ತು. ವಿದ್ಯುಚ್ಚಕ್ತಿಯಿಲ್ಲದ ಆ ಕಾಲದಲ್ಲಿ ರಾತ್ರಿ ಹೊತ್ತು ಮೋಂಬತ್ತಿಗಳನ್ನು ಬಳಸಲಾಗುತ್ತಿತ್ತು. ವಿಶ್ವೇಶ್ವರಯ್ಯನವರು ಸರ್ಕಾರದ ಕೆಲಸ ಮಾಡುವ ತನಕ ಮಾತ್ರ ಸರಕಾರ ಕೊಟ್ಟ ಮೋಂಬತ್ತಿ ಬಳಸುತ್ತಿದ್ದರು. ಅದು ಮುಗಿದೊಡನೆ, ತಮ್ಮ ಸ್ವಂತ ಖರ್ಚಿನಲ್ಲಿ ಕೊಂಡ ಮೋಂಬತ್ತಿ ಹತ್ತಿಸುತ್ತಿದ್ದರು – ಈ ಕತೆಯನ್ನು ಅದೆಷ್ಟೋ ಜನರ ಬಾಯಲ್ಲಿ ಕೇಳುತ್ತಿದ್ದೆವು.

  ವಿಶ್ವೇಶ್ವರಯ್ಯನವರು ೧೮೬೧ ಸೆಪ್ಟೆಂಬರ್ ೧೫ರಂದು ಕೋಲಾರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದರು. ತಂದೆ ಶ್ರೀನಿವಾಸಶಾಸ್ತ್ರಿ ಸಂಸ್ಕೃತ ವಿದ್ವಾಂಸರು. ತಾಯಿ ವೆಂಕಟಲಕ್ಷಮ್ಮನವರು. ಚಿಕ್ಕಬಳ್ಳಾಪುರದ ಸರ್ಕಾರಿ ಶಾಲೆಯಲ್ಲಿ ವಿಶ್ವೇಶ್ವರಯ್ಯ ಅವರ ಪ್ರಾಥಮಿಕ ವಿದ್ಯಾಭ್ಯಾಸ ಆರಂಭವಾಯಿತು. ವಿಶ್ವೇಶ್ವರಯ್ಯ ಅವರಿಗೆ ಹದಿನೈದು ವರ್ಷವಾಗಿದ್ದಾಗ ತಂದೆ ತೀರಿಕೊಂಡರು. ದಟ್ಟ ದಾರಿದ್ರ್ಯದ ಬದುಕು. ತಲೆ ಬೋಳಿಸಿಕೊಂಡು ಕೆಂಪು ಸೀರೆಯುಟ್ಟು ತಾಯಿ ಅವರಿವರ ಮನೆಯಲ್ಲಿ ದುಡಿಯುತ್ತ ಮಗನನ್ನು ಸಾಕಿ ಸಲಹಿದರು. ಸೋದರ ಮಾವ ಎಚ್ ರಾಮಯ್ಯನವರ ಸಹಾಯದಿಂದ ೧೮೭೫ರಲ್ಲಿ ವಿಶ್ವೇಶ್ವರಯ್ಯ ಬೆಂಗಳೂರಿಗೆ ಬಂದು ವೆಸ್ಲಿ ಮಿಶನ್ ಹೈಸ್ಕೂಲ್ ಸೇರಿದರು.

  ಒಮ್ಮೆಯಂತೂ ಎಸ್ ಎಸ್. ಎಲ್. ಸಿ ಪರೀಕ್ಷೆಗೆ ಕೂರಲು ಹಣದ ತೀವ್ರ ಮುಗ್ಗಟ್ಟಿನಿಂದಾಗಿ ಬೆಂಗಳೂರಿನಿಂದ ಮುದ್ದೇನಹಳ್ಳಿಗೆ ೩೫ ಕಿಲೋಮೀಟರ್ ನಡೆದುಕೊಂಡೇ ಹೋದರು. ಮನೆಯ ಪಾತ್ರೆ ಅಡವಿಟ್ಟು ಆ ತಾಯಿ ಹಣ ಹೊಂದಿಸಿಕೊಟ್ಟಿದ್ದರು. ಆದರೆ ಅವರಲ್ಲಿ ಬಡತನಕ್ಕೂ ಬಗ್ಗದ ಜೀವನೋತ್ಸಾಹವಿತ್ತು. ಬದುಕನ್ನು ಎದುರಿಸುವ ದಿಟ್ಟತನವಿತ್ತು. ಭವಿಷ್ಯದ ದೃಢ ಸಂಕಲ್ಪಗಳಿದ್ದವು. ವಿಶ್ವೇಶ್ವರಯ್ಯ ಸೆಂಟ್ರಲ್ ಕಾಲೇಜಿನಲ್ಲಿ ಬಿ. ಎ. ಓದತೊಡಗಿದರು. ಆ ಕಾಲದಲ್ಲಿ ಬಿ.ಎ ತರಗತಿಗಳಲ್ಲಿಯೇ ವಿಜ್ಞಾನದ ವಿಷಯವನ್ನೂ ಹೇಳಿಕೊಡುತ್ತಿದ್ದರು. ಬದುಕು ಸುಲಭವಿರಲಿಲ್ಲ. ಅನಾನುಕೂಲತೆಗಳ ನಡುವೆಯೇ ಮುಂದುವರೆದ ವಿದ್ಯಾಭ್ಯಾಸ. ದೈನಂದಿಕ ಖರ್ಚಿಗೆ ಹಣವಿಲ್ಲದೆ, ಒಂದು ಕೂರ್ಗಿ ಕುಟುಂಬದಲ್ಲಿ ಪಾಠ ಹೇಳಿಕೊಟ್ಟು ಹಣ ಹೊಂದಿಸಿದರು.

  ೧೮೮೦ರಲ್ಲಿ ಡಿಸ್ಟಿಂಕ್ಷನ್ ಪಡೆದು ಬಿ.ಎ. ಪಾಸು ಮಾಡಿದ ವಿಶ್ವೇಶ್ವರಯ್ಯನವರಿಗೆ ಪುಣೆಯಲ್ಲಿ ಇಂಜಿನಿಯರಿಂಗ್ ಓದಲು ವಿದ್ಯಾರ್ಥಿವೇತನ ಲಭಿಸಿತು. ಮೈಸೂರು ಸಂಸ್ಥಾನದಲ್ಲಿ ಇಂಜಿನಿಯರಿಂಗ್ ಕಾಲೇಜಿರಲಿಲ್ಲ. ೧೮೮೧ರಲ್ಲಿ ಇಂಜಿನಿಯರಿಂಗ್ ಸೇರಿದ ವಿಶ್ವೇಶ್ವರಯ್ಯ ಮೂರು ವರ್ಷದ ಕೋರ್ಸನ್ನು ಎರಡೂವರೆ ವರ್ಷಕ್ಕೆ ಮುಗಿಸಿದರು. ಪರೀಕ್ಷೆಯಲ್ಲಿ ಅವರ ಮೇಧಾವಿತನ ಪ್ರಜ್ವಲಿಸಿತು. ಜೇಮ್ಸ್ ಬರ್ಕ್ಲಿ ಬಹುಮಾನ ದೊರೆತುದಲ್ಲದೆ, ಬಾಂಬೆ ಪಿ.ಡಬ್ಲ್ಯೂ.ಡಿ ವಿಭಾಗದಲ್ಲಿ ಸಹಾಯಕ ಇಂಜಿನಿಯರ್ ಆಗಿ ನೌಕರಿ ದೊರೆಯಿತು. ಅಲ್ಲಿಂದ ಪುಣೆಗೆ ವರ್ಗವಾಯಿತು.

  ಪುಣೆಯಲ್ಲಿ ವಿಶ್ವೇಶ್ವರಯ್ಯನವರ ಅನೇಕ ಅನ್ವೇಷಣೆಗಳು ಅವರ ಮೇಧಾವಿತನವನ್ನು ಎತ್ತಿ ತೋರಿದವು. ವಿಶ್ವೇಶ್ವರಯ್ಯ ಅಟೋಮ್ಯಾಟಿಕ್ ಸ್ಲೂಸ್ ಗೇಟ್ ಕಂಡು ಹಿಡಿದರು. ಪುಣೆ ನಗರಕ್ಕೆ ಒಂದು ಸರೋವರದಿಂದ ನೀರಿನ ಪೂರೈಕೆಯಾಗುತ್ತಿತ್ತು. ಸರೋವರ ಕೆಲವು ತಿಂಗಳು ಉಕ್ಕಿ ಹರಿಯುತ್ತಿತ್ತು

  ೧೯೦೬ರಲ್ಲಿ ಬ್ರಿಟಿಷರ ಆಡಳಿತದಲ್ಲಿದ್ದ ಯೆಮೆನ್ ದೇಶದ ಏಡನ್ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ವಿಶ್ವೇಶ್ವರಯ್ಯನವರನ್ನು ಕಳುಹಿಸಲಾಯಿತು. ಬೆಟ್ಟಗಳಿಂದ ಸುತ್ತುವರೆದ ಏಡನ್ ನಗರದಲ್ಲಿ ಸುರಿದ ಮಳೆ, ಮರಳು ಭೂಮಿಯಲ್ಲಿ ಹಿಂಗಿ ಹೋಗುತ್ತಿತ್ತು. ವಿಶ್ವೇಶ್ವರಯ್ಯನವರು ಆ ಭೂಪ್ರದೇಶವನ್ನು ಕೂಲಂಕಷವಾಗಿ ಅಧ್ಯಯನ ಮಾಡಿದರು. ದೂರದ ಗುಡ್ಡಗಾಡುಗಳಲ್ಲಿ ಬಿದ್ದ ಮಳೆ ಹರಿದು ಹಿಂಗುವ ಜಾಗ, ಏಡನ್ ನಗರದಿಂದ ೧೮ ಮೈಲಿಗಳ ದೂರದಲ್ಲಿತ್ತು. ಇಲ್ಲಿ ನೆಲದಾಳದಲ್ಲಿ ನೀರಿನ ಜಲಾಶಯವಿರುವುದನ್ನು ವಿಶ್ವೇಶ್ವರಯ್ಯನವರು ಗುರುತಿಸಿದರು. ಕುಡಿಯುವ ನೀರಿನ ವ್ಯವಸ್ಥೆಯನ್ನು ಯೋಜಿಸಿಕೊಟ್ಟರು. ವಿಶ್ವೇಶ್ವರಯ್ಯನವರ ಕೊಡುಗೆಯನ್ನು ಏಡನ್ ನಗರ ಇಂದೂ ನೆನಪಿಟ್ಟುಕೊಂಡಿದೆ. ವಿಶ್ವೇಶ್ವರಯ್ಯನವರ ಈ ಅನುಪಮ ಸೇವೆಗೆ ಬ್ರಿಟಿಷ್ ಸರ್ಕಾರ ಅವರಿಗೆ ಕೈಸರ್– ಎ-ಹಿಂದ್ ಬಿರುದು ನೀಡಿ ಗೌರವಿಸಿತು.

  0
  2021-07-08T02:01:57+00:00

  Answer:

  hello actually I can understand and speak kanada but my kanada isnt bengluru side kanada means I am not fluent in it so sis pls type in english hehe actually I just started to talk in kanada cuz I knew it

Leave an answer

Browse

9:3-3+1x3-4:2 = ? ( )